Hot Posts

6/recent/ticker-posts

ಇದು ದೇಶದ ಗೆಲುವು, ಉಕ ಲೋಕಸಭಾ ಕ್ಷೇತ್ರದ ಮತದಾರರಿಗೆ ಚಿರಋಣಿ: ವಿಶ್ವೇಶ್ವರ ಹೆಗಡೆ ಕಾಗೇರಿ

ಕುಮಟಾ: ಲೋಕಸಭಾ ಚುನಾವಣೆ ಮತ ಎಣಿಕೆಯ ಆರಂಭದಿಂದಲೇ ಮುನ್ನಡೆ ಕಾಯ್ದುಕೊಂಡು ಬಂದಿದ್ದ ಬಿಜೆಪಿ ಯ ವಿಶ್ವೇಶ್ವರ ಹೆಗಡೆ ಕಾಗೇರಿ ಅಂತಿಮವಾಗಿ ದಾಖಲೆ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ. ಮಾಜಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಂಗ್ರೆಸ್ ನ ಅಂಜಲಿ ನಿಂಬಾಳ್ಕರ್ ಅವರನ್ನು 337428 ಮತ ಅಂತರದಿಂದ ಸೋಲಿಸಿದ್ದಾರೆ. ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ 

ಉಕ ಮತದಾರರಿಗೆ ನಾನು ಚಿರಋಣಿ ಎಂದ ಕಾಗೇರಿ

ಇದು ದೇಶದ ಗೆಲುವು, ಇದು ಭಾರತದ ಗೆಲುವು. ಭಾರತವನ್ನು ವಿಶ್ವಗುರು ಮಾಡಲು ಮತ್ತೊಮ್ಮೆ ಮೋದಿಯವರನ್ನು ಪ್ರಧಾನಿ ಮಾಡಿದ ಸರ್ವ ದೇಶಪ್ರೇಮಿ ಮತದಾರ ಬಂಧುಗಳಿಗೆ ಕೋಟಿ ಕೋಟಿ ಧನ್ಯವಾದಗಳು. ಕಿತ್ತೂರು, ಖಾನಾಪುರ ಒಳಗೊಂಡ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದನನ್ನಾಗಿ ನನಗೆ ಅಭೂತಪೂರ್ವ ಗೆಲುವು ತಂದುಕೊಟ್ಟ, ನನ್ನ ಪ್ರೀತಿಯ ಉತ್ತರ ಕನ್ನಡದ ಜನತೆಗೆ ನಾನು ಎಂದಿಗೂ ಚಿರ ಋಣಿ. ನಿಮ್ಮ ಸೇವಕನಾಗಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಮಾಡಲು ನನ್ನ ಬೆವರು ಮತ್ತು ರಕ್ತವನ್ನು ಒಂದು ಮಾಡುವೆ ಎಂದು ನಿಮ್ಮ ಮುಂದೆ ಪ್ರಮಾಣ ಮಾಡುತ್ತಿದ್ದೇನೆ ಎಂದು ವಿಶ್ವೇಶ್ವರ ಹೆಗಡೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪ್ರತಿಕ್ರಿಯೆ

Post a Comment

0 Comments