ವಿದ್ಯಾರ್ಥಿಗಳಿಗೆ ಸಂವಿಧಾನದ ಅರಿವು ಮೂಡಿಸುವ ಸಲುವಾಗಿ ದಿನಾಂಕ 15. 6 .2024ರಂದು ಲಯನ್ಸ್ ಶಾಲೆಯಲ್ಲಿ ವಿದ್ಯಾರ್ಥಿಗಳ ಚುನಾವಣೆಯನ್ನು ನಡೆಸಲಾಗಿತ್ತು. ಶಿಸ್ತು ,ಸಮಯ ನಿರ್ವಹಣೆ ಪರಿಗಣಿಸಿ ಮೊಬೈಲ್ ಆಪ್ ಬಳಸಿ ವಿದ್ಯಾರ್ಥಿ ಪ್ರತಿನಿಧಿಗಳನ್ನು ಆರಿಸಲಾಯಿತು. ಈ ವಿದ್ಯಾರ್ಥಿಗಳಿಗೆ ದಿನಾಂಕ 7.8.2024 ರಂದು ಲಯನ್ಸ್ ಸಭಾಭವನದಲ್ಲಿ ಮುಖ್ಯ ಅತಿಥಿಗಳಾಗಿ ಲಯನ್ ವಿನಾಯಕ್ ಭಟ್ ನಿವೃತ್ತ ಎಕ್ಸಿಕ್ಯೂಟಿವ್ ಇಂಜಿನಿಯರ್ ಅವರು ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಹಾಗೂ ವ್ಯಕ್ತಿಯ ಪರಿಪೂರ್ಣತೆಗೆ ಔಪಚಾರಿಕ ಅನೌಪಚಾರಿಕ ಶಿಕ್ಷಣ, ಕ್ರೀಡೆಯಲ್ಲಿ ಪಾಲ್ಗೊಳ್ಳುವಿಕೆ, ರಾಷ್ಟಾಭಿಮಾನ, ಮಹತ್ವಾಕಾಂಕ್ಷೆ, ಮಾರ್ಗದರ್ಶನ, ಶಿಸ್ತು ಮುಂತಾದ ವಿಷಯಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಲಯನ್ಸ್ ಶಿಕ್ಷಣ ಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ಪ್ರೊಫೆಸರ್ ಲಯನ್ ರವಿ ನಾಯಕ್ ಅವರು ಪ್ರಸ್ತಾವಿಕ ನುಡಿಗಳನ್ನು ಮಾತನಾಡಿ ಅಂಕಗಳೊಂದಿಗೆ ವಿದ್ಯಾರ್ಥಿಯ ಸರ್ವತೋಮುಖ ಅಭಿವೃದ್ಧಿಯು ಮುಖ್ಯ ಎಂದರು. ಭಾಸ್ಕರ್ ಸ್ವಾದಿ ಮೆಮೋರಿಯಲ್ ಲಯನ್ಸ್ ಪಿಯ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಿ ಪ್ರೋತ್ಸಾಹಿಸಲಾಯಿತು. ಹದಿಹರೆಯದ ವಯಸ್ಸಿನ ಮಕ್ಕಳ ಯಶಸ್ವಿ ಶಿಕ್ಷಣಕ್ಕಾಗಿ ಪುಸ್ತಕವನ್ನು ವಿತರಿಸಲಾಯಿತು.
0 Comments